Breaking News

ಖಜಾನೆ ಖಾಲಿ ಮಾಡಿದ್ದೇ ಕಾಂಗ್ರೆಸ್ ಸಾಧನೆ: ಎಚ್.ಡಿ.ಕುಮಾರಸ್ವಾಮಿ ಟೀಕೆ

ಕೋಣಂದೂರು: ‘ಅಭಿವೃದ್ಧಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ರೂಪಿಸದೇ ಗ್ಯಾರಂಟಿಗಳಿಗಾಗಿ ₹52,000 ಕೋಟಿ ಸಾಲ ಮಾಡಿದ್ದೇ ಕಾಂಗ್ರೆಸ್ ಪಕ್ಷದ ಸಾಧನೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಇಲ್ಲಿ ಸೋಮವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ರಚನೆಯಾಗಿ 11 ತಿಂಗಳು ಕಳೆದರೂ ಅಭಿವೃದ್ಧಿಗಾಗಿ ಒಂದು ಪೈಸೆಯನ್ನೂ ಕೊಡಲಿಲ್ಲ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುವುದು ಇವರ ಸಾಧನೆ. ದಲಿತರಿಗೆ ಮೀಸಲಿದ್ದ ಹಣವನ್ನು ಗ್ಯಾರಂಟಿಗಳಿಗೆ ವಿನಿಯೋಗಿಸುವ …

Read More »

ರಾಜಕೀಯದಿಂದ ದೂರ ಸರಿದ್ರಾ ವೀಣಾ ಕಾಶಪ್ಪನವರ್?

ಬಾಗಲಕೋಟೆ: ಬಾಗಲಕೋಟೆ ಕಾಂಗ್ರೆಸ್ (Bagalkot Congress) ಬಿಕ್ಕಟ್ಟಿಗೆ ಇನ್ನು ತೆರೆ ಬಿದ್ದಿಲ್ಲ ಕಾಣುತ್ತಿಲ್ಲ. ನಾಯಕರ ನಡುವಿನ ಸಂಧಾನ ಸಭೆ ವಿಫಲವಾದ ಬಳಿಕ ಪಕ್ಷದ ಚಟುವಟಿಕೆಗಳಿಂದ ದೂರವೇ ಉಳಿದಿರುವ ವೀಣಾ ಕಾಶಪ್ಪನವರ್ (Veena Kashappanavar), ರಾಜಕೀಯದಿಂದ ದೂರ ಸರಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಎದುರಾಗಿದೆ.ಏಕೆಂದರೆ ಫೇಸ್‌ಬುಕ್‌ನಲ್ಲಿ ವೀಣಾ ಭಾವನಾತ್ಮಕ ಸಂದೇಶ ನೀಡಿದ್ದು, ಕೊಪ್ಪಳ (Koppala) ಉಸ್ತುವಾರಿ ಕೊಟ್ಟರೂ ಗೈರಾಗಿದ್ದಾರೆ. ವೀಣಾ ಕಾಶಪ್ಪನವರ್ ಪೋಸ್ಟ್​ನಲ್ಲಿ ಏನಿದೆ? ಕಣ್ಣು ನಕ್ಕರೂ ಒದ್ದೆಯಾಗುತ್ತದೆ, ಅತ್ತರೂ ಒದ್ದೆಯಾಗುತ್ತದೆ. …

Read More »

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

ಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರಣಿ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ತಿಂಗಳಾನುಗಟ್ಟಲೆ ಓಡಾಡಿದರು ವೀಸಾ ಸಿಗುವುದಿಲ್ಲ ಆದರೆ ಪ್ರಜ್ವಲ್ ರೇವಣ್ಣ ಅವರಿಗೆ ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು ಎಂದು ಪ್ರಶ್ನಿಸಿದರು. ಹಾವೇರಿಯಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಜರ್ಮನಿಗೆ ಹೋಗಲು ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು? ಜನರು ತಿಂಗಳುಗಟ್ಟಲೆ ಓಡಾಡಿದರೂ ವೀಸಾ …

Read More »

ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ;

ಬೆಂಗಳೂರು : ರಾಜ್ಯದ ಪ್ರಸ್ತುತ ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಪ್ರಭಾವಿ ಜಿಲ್ಲೆಯ ಶಾಸಕರದ್ದು ಎನ್ನಲಾದ ಈ ವೀಡಿಯೋದಲ್ಲಿ ಮಹಿಳೆಯೊಬ್ಬರ ಜೊತೆ ವೀಡಿಯೋ ಕಾಲ್ ನಲ್ಲಿ ಸಂಭಾಷಣೆ ನಡೆಸಿದ್ದಾಗಿದೆ. ಅಷ್ಟಕ್ಕೂ ಆ ವೀಡಿಯೋದಲ್ಲಿರುವ ಮಹಿಳೆ ಕೂಡಾ ರಾಜಕೀಯ ವ್ಯಕ್ತಿಗಳ ಒಡನಾಟ ಹೊಂದಿದವರಾಗಿದ್ದಾರೆ ಇನ್ನೂ ಈ‌ ಘಟನೆ ವೀಡಿಯೋದಲ್ಲಿ ಇದ್ದಾರೆ ಎನ್ನಲಾದ ಶಾಸಕ ಹಾಗೂ ಮಹಿಳೆ ಯಾರೂ ಹೇಳಿಕೆ ನೀಡಿಲ್ಲ. ಸಧ್ಯ …

Read More »

ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದರೂ ಆದೇಶ ಪಡೆಯದೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಚುನಾಣಾಧಿಕಾರಿ ಆದೇಶಿಸಿದ್ದಾರೆ. ಈ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಿ ಮಂಗಳವಾರ ಪ್ರತ್ಯೇಕ ಆದೇಶ ಹೊರಡಿಸಿರುವ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಭೂಬಾಲನ್, ಚುನಾವಣೆಯಂಥ ಮಹತ್ವದ ಕರ್ತವ್ಯವಾಗಿದ್ದರೂ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಸಸ್ಪೆಂಡ್ ಮಾಡಿದ್ದಾಗಿ ಆದೇಶದಲ್ಲಿ ವಿವರಿಸಿದ್ದಾರೆ. ಬಸವನಬಾಗೇವಾಡಿ ತಾಲೂಕಿನ ಅಬ್ಬಿಹಾಳ ಸರ್ಕಾರಿ ಹಿರಿಯ …

Read More »

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ(Special investigative team) ಅಧಿಕಾರಿಗಳ ತಂಡ ಇಂದು ಬುಧವಾರ ಹಾಸನ ಜಿಲ್ಲೆಯ ಹೆಚ್ ಡಿ ರೇವಣ್ಣ ನಿವಾಸಕ್ಕೆ ತೆರಳಿ ಸ್ಥಳ ಮಹಜರು ನಡೆಸಲಿದ್ದಾರೆ. ಹಾಸನದಲ್ಲಿರುವ ಹೆಚ್ ಡಿ ರೇವಣ್ಣ ನಿವಾಸ ಮತ್ತು ಫಾರ್ಮ್ ಹೌಸ್ ನಲ್ಲಿ ತಮ್ಮ ವಿರುದ್ಧ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ನಿರಂತರವಾಗಿ ಲೈಂಗಿಕ …

Read More »

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಬಿಟ್ಟು ಕೆಳಗೆ ಇಳಿರಿ ಕೇವಲ 24 ಗಂಟೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸವಾಲು ಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬಿಡಿ ಅಧಿಕಾರದಿಂದ ಇಳೀರಿ ನೀವು 24 ಗಂಟೆಯಲ್ಲಿ ಅವರನ್ನ ನಾವು ಕಸ್ಟಡಿಗೆ …

Read More »

ನಾನು ತಪ್ಪು ಮಾಡಿಲ್ಲ, ಯಾವ ತನಿಖೆಯಾದ್ರೂ ಎದುರಿಸಲು ಸಿದ್ದ :. ರೇವಣ್ಣ

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆಯನ್ನು ಎದುರಿಸುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪನ್ನು ಮಾಡಿಲ್ಲ.ಯಾವ ತನಿಖೆಯನ್ನೂ ಎದುರಿಸಲು ಸಿದ್ದನಾಗಿದ್ದೇನೆ. ಎಸ್ ಐಟಿ ಅಧಿಕಾರಿಗಳು ನಮ್ಮ ಮನೆಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ನಲ್ಲಿ ಏನಿದೆ ಅಂತ ತಿಳಿದುಕೊಳ್ಳುತ್ತೇನೆ ಎಂದರು.   ಇದೆಲ್ಲಾ ಸುಳ್ಳಿನ ಆರೋಪ ಮಾಡಲಾಗಿದೆ. ನಾನು ಏನೂ …

Read More »

ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿ

: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಾಮಿ, ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಇಂದು ಗೃಹಕಚೇರಿಯಲ್ಲಿ ಡಿಸಿಎಂ ಡಿಕೆಶಿ ಕೂಡ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಡಿಕೆಶಿ, ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ …

Read More »

24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ ! ಪ್ರಜ್ವಲ್ ಗೆ SIT ನೋಟೀಸ್ !

ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣಗೆ SIT ನೋಟೀಸ್ ಜಾರಿ ಮಾಡಿದೆ. ಒಂದುವೇಳೆ ವಿಚಾರಣೆಗೆ ಹಾಜರ್ ಆಗದಿದ್ದರೆ ಮುಂದೇನು ಎಂಬ ಪ್ರಶ್ನೆಯೂ ಮೂಡಿದೆ. CRPC 41A ರ ಅಡಿ SIT ಅಧಿಕಾರಿಗಳು ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಗೆ ತಮ್ಮ ಮೇಲೆ ಕೇಳಿಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಹಾಜರ್ ಆಗಬೇಕಾಗಿ ನೋಟೀಸ್ ನೀಡಿದೆ.ಸದ್ಯ ರೇವಣ್ಣ ಹಾಸನದಲ್ಲೇ ಇದ್ದು ವಿಚಾರಣೆಗೆ ಹಾಜರ್ …

Read More »